ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರು ಹಾಗೂ ಸುಕ್ರಜ್ಜಿ ಎಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮಗೌಡ ಅವರು ಇಹಲೋಕ ತ್ಯಜಿಸಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಕಂಬನಿ ಮಿಡಿದಿದದಾರೆ. ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿಯವರು, ಮದ್ಯಪಾನ ವಿರೋಧಿ ಹೋರಾಟ ಸೇರಿ ಅನೇಕ ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಅವರ ನಾಲಗೆಯ ಮೇಲೆ ಐದು ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳು ನಲಿದಾಡುತ್ತಿದ್ದವು ಎಂದು ಕೇಳಿದ್ದೇನೆ. ಅವರ ಅಗಲಿಕೆ ರಾಜ್ಯದ ಸಾಂಸ್ಕೃತಿಕ, ಜನಪದ ಲೋಕಕ್ಕೆ ಬಹುದೊಡ್ಡ ನಷ್ಟ.ಅವರಿಗೆ ಸದ್ಗತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.