ಕರ್ನಾಟಕ

"ರುದ್ರ ಗರುಡ ಪುರಾಣ" ಚಿತ್ರದ ಯಶಸ್ಸಿನ ಖುಷಿ. ಮಾಧ್ಯಮದ ಮುಂದೆ ಹಂಚಿಕೊಂಡ ರಿಷಿ

2025 ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ, ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣ’ ಚಿತ್ರ ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

2025 ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ, ರಿಷಿ ನಾಯಕನಾಗಿ ನಟಿಸಿರುವ `ರುದ್ರ ಗರುಡ ಪುರಾಣ’ ಚಿತ್ರ ಕಳೆದವಾರ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಖುಷಿಯನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.



ನಮ್ಮ ಚಿತ್ರಕ್ಕೆ ಜನರು ತೋರುತ್ತಿರುವ ಒಲವು. ಈ ಚಿತ್ರದ ಗೆಲುವು ಎಂದು ಮಾತನಾಡಿದ ನಟ ರಿಷಿ, ಈ ಸಂದರ್ಭದಲ್ಲಿ ನಾನು ಮೊದಲು ಮಾಧ್ಯಮದವರನ್ನು ಅಭಿನಂದಿಸುತ್ತೇನೆ. ಅವರು ನಮ್ಮ ಚಿತ್ರದ ಬಗ್ಗೆ ಬರೆದ  ಅದ್ಭುತ ವಿಮರ್ಶೆಗಳನ್ನು ನೋಡಿ ನಮ್ಮ ಚಿತ್ರಕ್ಕೆ ಹೆಚ್ಚು ಜನರು ಬರುತ್ತಿದ್ದಾರೆ. ಐದು ದಿನಗಳಲ್ಲಿ ಥಿಯೇಟರ್ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಿಗೆ ಆಗಿದೆ. ತೆಲುಗು ಡಬ್ಬಿಂಗ್ ರೈಟ್ಸ್ ಸಹ ಉತ್ತಮ ಮೊತ್ತಕ್ಕೆ ಮಾರಾಟವಾಗಿದೆ. ಎಂದರು.

ಗಿರೀಶ್ ಶಿವಣ್ಣ, ಛಾಯಾಗ್ರಾಹಕ ಸಂದೀಪ್ ಕುಮಾರ್, ಸಂಕಲನಕಾರ ಮನು ಶೇಡ್ಗಾರ್, ಸಂಭಾಷಣೆ ಬರೆದಿರುವ ರಘು ನಿಡುವಳ್ಳಿ ಮುಂತಾದವರು "ರುದ್ರ ಗರುಡ ಪುರಾಣ" ದ ಯಶಸ್ಸನ್ನು ತಮ್ಮ ಮಾತುಗಳ ಮೂಲಕ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಚಿತ್ರದ ತಂದೆ ಮಗನ ಬಾಂಧವ್ಯದ ಹಾಡೊಂದನ್ನು ಬಿಡುಗಡೆ ಮಾಡಲಾಯಿತು.