ಕರ್ನಾಟಕ

ಮಂಡ್ಯದಲ್ಲಿ HDK ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ..!

ಮಂಡ್ಯದ ಸರ್ ಎಂ.ವಿ ಕ್ರೀಡಾಂಗಣದಲ್ಲಿ ಉದ್ಯೋಗ ಮೇಳ ಆಯೋಜನೆಯಾಗಿದ್ದು, 150ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗುವ ಸಾಧ್ಯತೆ ಇದೆ.

ಮಂಡ್ಯದಲ್ಲಿ ಇಂದು ಕೇಂದ್ರ ಸಚಿವ ಹೆಚ್.ಡಿ.ಕೆ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಮಂಡ್ಯದ ಸರ್ ಎಂ.ವಿ ಕ್ರೀಡಾಂಗಣದಲ್ಲಿ ಉದ್ಯೋಗ ಮೇಳ ಆಯೋಜನೆಯಾಗಿದ್ದು, 150ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗುವ ಸಾಧ್ಯತೆ ಇದೆ. 

ಮಂಡ್ಯ ಜಿಲ್ಲೆಯಲ್ಲಿ ನಿರುದ್ಯೋಗ ನಿವಾರಣೆಗೆ ಮುಂದಾಗಿರುವ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, 3 ಸಾವಿರ ಮಂದಿಗೆ ಉದ್ಯೋಗ ಕೊಡಿಸುವ ಗುರಿ ಹೊಂದಿದ್ದಾರೆ. ಉದ್ಯೋಗ ಮೇಳಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಉದ್ಯೋಗ ಮೇಳಕ್ಕೆ ಸ್ವತಃ ಹೆಚ್ ಡಿಕೆ ಅವರೇ ಚಾಲನೆ ನೀಡಲಿದ್ದಾರೆ.