ಕರ್ನಾಟಕ

ಪಾಪ ನನ್ನ ಮಗನಿಗೆ ಏನು ಗೊತ್ತಾಗಲ್ಲ; ಪ್ರಜ್ವಲ್ ಒಳ್ಳೆಯ ಹುಡುಗ; ಮಗನನ್ನ ನೆನೆದು ರೇವಣ್ಣ ಭಾವುಕ

ಪಾಪ ಪ್ರಜ್ವಲ್‌ಗೆ ಏನು ಗೊತ್ತಾಗಲ್ಲ, ಅವನು ಒಳ್ಳೆ ಹುಡುಗ. ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಸವಾಲು ಹಾಕಿದ್ದಾರೆ.

ಹಾಸನ : ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರು ಪ್ರಸ್ವಲ್ ರೇವಣ್ಣ ಬಗ್ಗೆ ತಂದೆ, ಮಾಜಿ ಸಚಿವ ರೇವಣ್ಣ ಮಾತನಾಡಿದ್ದಾರೆ. ಜೈಲಿನಲ್ಲಿರುವ ಮಗನನ್ನ ನೆನೆದು ಭಾವುಕರಾಗಿದ್ದಾರೆ. 

ಹಾಸನದ ಆಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಾಪ ಪ್ರಜ್ವಲ್‌ಗೆ ಏನು ಗೊತ್ತಾಗಲ್ಲ, ಅವನು ಒಳ್ಳೆ ಹುಡುಗ. ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು  ಸವಾಲು ಹಾಕಿದ್ದಾರೆ.