ಕರ್ನಾಟಕ

ಚನ್ನಪಟ್ಟಣದಲ್ಲಿ ನಿಖಿಲ್ ಗೆಲ್ಲುವ ವಿಶ್ವಾಸವಿದೆ: ಹೆಚ್​​ಡಿಕೆ

ಬಿಜೆಪಿ ಜೆಡಿಎಸ್‌ ನಿಂದ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ನ ಇಳಿಸಿದ್ದೇವೆ. ಎಷ್ಟೇ ಅಪಪ್ರಚಾರ ಮಾಡಿದರೂ ಚನ್ನಪಟ್ಟಣ ಜನತೆಯ ಆಶೀರ್ವಾದ ನಮ್ಮ ಮೇಲಿದೆ ಎಂದು ಹೆಚ್​​ಡಿಕೆ ಹೇಳಿದ್ದಾರೆ.

ಕರ್ನಾಟಕದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ಕಾವು ಜೋರಾಗಿದೆ. ಅದರಲ್ಲೂ ಚನ್ನಪಟ್ಟಣದಲ್ಲಿ ಉಪಚುನಾವಣೆ ಚಟುವಟಿಕೆ ಗರಿಗೆದರಿದೆ. ಚುನಾವಣೆಯಲ್ಲಿ ಮಗನನ್ನು ಗೆಲ್ಲಿಸಿಕೊಂಡೇ ಬರಬೇಕೆಂದು ಪಟ್ಟು ಹಿಡಿದಿರುವ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಇಂದು ತುಮಕೂರಿನ ಸಿದ್ಧಗಂಗಾ ಶ್ರೀಗಳನ್ನು ಭೇಟಿ ಮಾಡಿದ್ದಾರೆ.

ಶ್ರೀಗಳ ಭೇಟಿ ಬಳಿಕ ಮಾತನಾಡಿದ ಅವರು, ಎಲ್ಲಾ ಕನ್ನಡಿಗರಿಗೂ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಇದೇ ವೇಳೆ ಬಿಜೆಪಿ ಜೆಡಿಎಸ್‌ ನಿಂದ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ನ ಇಳಿಸಿದ್ದೇವೆ. ಎಷ್ಟೇ ಅಪಪ್ರಚಾರ ಮಾಡಿದರೂ ಚನ್ನಪಟ್ಟಣ ಜನತೆಯ ಆಶೀರ್ವಾದ ನಮ್ಮ ಮೇಲಿದೆ. ನಿಖಿಲ್ NDA ಅಭ್ಯರ್ಥಿ ಗೆಲ್ಲುವ ವಿಶ್ವಾಸ ಇದೆ. ನೀರಾವರಿ ಬಗ್ಗೆ ಅಭಿವೃದ್ಧಿ ಬಗ್ಗೆ ಪುಟಗಟ್ಟಲೇ ಗಮನಿಸಿದ್ದೇನೆ. ಟೀಕೆ ಟಿಪ್ಪಣಿ ಬಗ್ಗೆ ನೋಡಿದ್ದೇನೆ. ಇದಕ್ಕೆ ಚನ್ನಪಟ್ಟಣ ಮತದಾರರು ನಿರ್ಧಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.