ಕರ್ನಾಟಕ

ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನೇ ಯಾಕೆ ನಿಲ್ಲಿಸಿದ್ರು ಗೊತ್ತಾ..? ಹೆಚ್​​ಡಿಕೆ ಪ್ರಶ್ನೆ..!

ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿರುವ ವಿಚಾರದ ಬಗ್ಗೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿರುವ ವಿಚಾರದ ಬಗ್ಗೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಇದು ಕರ್ನಾಟಕ, ಯಾರು ಎಲ್ಲಿಗೆ ಬೇಕಾದರೂ ಹೋಗಿ ಚುನಾವಣೆಗೆ ನಿಲ್ಲಬಹುದು.ರಾಹುಲ್ ಗಾಂಧಿ ಅಮೇಥಿಯಲ್ಲಿ ಸೋಲುತ್ತೇನೆ ಎಂದು ಬಂದು ಕೇರಳದ ವಯನಾಡಿಗೆ ಬಂದು ನಿಲ್ಲಲಿಲ್ಲವೇ? ಪ್ರಿಯಾಂಕಾ ಗಾಂಧಿ ಅಲ್ಲೇ ಉತ್ತರ ಪ್ರದೇಶದಲ್ಲಿ ಸ್ಪರ್ಧೆ ಮಾಡಬಹುದಿತ್ತು. ಅವರ ಕುಟುಂಬ ಯಾವಾಗಲೂ ಅಮೇಥಿ, ರಾಯ್ ಬರೇಲಿ ಕ್ಷೇತ್ರಗಳಲ್ಲಿ ನಿಲ್ಲುತ್ತಿದ್ದರು. ಹಾಗಾದರೆ, ಅವರು ಕೇರಳಕ್ಕೆ ಬಂದು ಏಕೆ ನಿಂತರು? ಈ ಬಗ್ಗೆ ಕಾಂಗ್ರೆಸ್ ನಾಯಕರ ಮೌನ ಯಾಕೆ? ಎಂದು ತಿರುಗೇಟು ಕೊಟ್ಟರು.