ಕರ್ನಾಟಕ

ಮದ್ಯ ಸೇವಿಸಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ಸಸ್ಪೆಂಡ್‌!

ವೈದ್ಯಾಧಿಕಾರಿಯೊಬ್ಬ ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದು ಅಸಭ್ಯವಾಗಿ ವರ್ತಿಸಿದ ಘಟನೆ ಸಿರಗುಪ್ಪ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.

ಬಳ್ಳಾರಿ: ವೈದ್ಯಾಧಿಕಾರಿಯೊಬ್ಬ ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದು ಅಸಭ್ಯವಾಗಿ ವರ್ತಿಸಿದ ಘಟನೆ ಸಿರಗುಪ್ಪ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಸಿರಗುಪ್ಪ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಈರಣ್ಣ ಮದ್ಯ ಸೇವಿಸಿ ಆಸ್ಪತ್ರೆಗೆ ಬರುತ್ತಿದ್ದ, ಸಾರ್ವಜನಿಕರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಈ ಘಟನೆಯಿಂದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಬಳ್ಳಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನಿಖೆ ನಡೆಸಿ, ಕರ್ತವ್ಯ ಲೋಪ ಮತ್ತು ದುರ್ನಡತೆಯ ಆಧಾರದ ಮೇಲೆ ವೈದ್ಯಾಧಿಕಾರಿ ಈರಣ್ಣರನ್ನ ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.