ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದೆ. ಫೆಂಗಲ್ ಸೈಕ್ಲೋನ್ ಎಫೆಕ್ಟ್ ಈಗಾಗಲೇ ತಮಿಳುನಾಡಿಗೆ ತಟ್ಟಿದೆ. ಈಗಾಗಲೇ ತಮಿಳುನಾಡಿನಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದು, ಡಿಸೆಂಬರ್ 1ರಿಂದ ಕರ್ನಾಟಕದಲ್ಲೂ ಮಳೆಯಬ್ಬರ ಶುರುವಾಗಲಿದೆ.
ಕರ್ನಾಟಕದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.