ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ,ಈಗಾಗಲೇ ತಮಿಳುನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ತಮಿಳಿಗರು ತತ್ತರಗೊಂಡಿದ್ದಾರೆ. ಇದೀಗ ಕರ್ನಾಟಕದ ಕರಾವಳಿ ಜಿಲ್ಲೆಗೂ ಕೂಡ ಫೆಂಗಲ್ ಚಂಡಮಾರುತದ ಎಫೆಕ್ಟ್ ತಟ್ಟುವಂತೆ ಕಾಣುತ್ತಿದೆ. ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು, ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಮಂಗಳೂರು, ಉಡುಪಿ ಭಾಗದಲ್ಲಿ ಮೋಡ ಕವಿದ ವಾತಾವರಣ ತುಂಬಿದೆ. ಪಣಂಬೂರು, ಉಳ್ಳಾಲ, ಸೋಮೇಶ್ವರ ಬೀಚ್‌ಗಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ.