ಬೆಳಗಾವಿ : ಮಳೆಯ ಆರ್ಭಟಕ್ಕೆ ಮನೆ ಕುಸಿದು ಮಹಿಳೆ ಸ್ಥಿತಿ ಗಂಭೀರವಾಗಿರುವ ಘಟನೆಯೊಂದು ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಾಪುರದಲ್ಲಿ ನಡೆದಿದೆ. ಸವದತ್ತಿ ಪಟ್ಟಣದಲ್ಲಿ ಸುರಿದ ಭಾರೀ ಮಳೆಯಿಂದ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಯಲ್ಲವ್ವ ಯಮನೂರ(60) ಎಂಬ ಮಹಿಳೆಗೆ ಗಂಭೀರವಾಗಿ ಗಾಯಗೊಂಡಿದ್ದು, ಸವದತ್ತಿ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಸಂಬಂಧ ಗಾಯಾಳು ಯಲ್ಲವ್ವರನ್ನು ಸವದತ್ತಿ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ರವಾನಿಸಿಲಾಗಿದೆ ಎಂದು ತಿಳಿದುಬಂದಿಂದೆ. ಈ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.