ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಆರೋಪದ ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ದರ್ಶನ್, ರೇಣುಕಾಸ್ವಾಮಿ ಹತ್ಯೆ ಬಗ್ಗೆ ಪಶ್ಚಾತಾಪ ಕಾಡಲಾರಂಭಿಸಿದೆ. ನಾನು ಇಲ್ಲಿಂದ ಹೊರಗಡೆ ಹೋದಮೇಲೆ ರೇಣುಕಾಸ್ವಾಮಿ ಕುಟುಂಬವನ್ನು ಭೇಟಿಯಾಗ್ತೀನಿ, ಸಹಾಯ ಮಾಡ್ತೀನಿ ಎಂದು ಜೈಲು ಸಿಬ್ಬಂದಿಯೊಬ್ಬರ ಜೊತೆ ಮನ ಬಿಚ್ಚಿ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೌದು, ಏನೋ ಮಾಡಲು ಹೋಗಿ ಏನೋ ಆಗಿದೆ. ನನ್ನದು ಸಾಯಿಸುವ ಮನಸಲ್ಲ, ನಾನಂತೂ ಕೊಲೆ ಮಾಡಿಲ್ಲ, ಮೇಲೊಬ್ಬನಿದ್ದಾನೆ ಎಂದು ಜೈಲು ಸಿಬ್ಬಂದಿಯೊಬ್ಬರ ಜೊತೆ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಕಳೆದ ಎರಡು ದಿನದಿಂದ ಆಕ್ಟೀವ್ ಆಗಿರುವ ದರ್ಶನ್ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಬಳಿಯೂ ಮಾತನಾಡಿದ್ದಾರೆ. ಕಳೆದ ಬಾರಿ ಪತ್ನಿ ಬಂದಾಗಲೂ ರೇಣುಕಾಸ್ವಾಮಿ ಪತ್ನಿ ಹಾಗೂ ಕುಟುಂಬದ ನೋವು, ಸಮಸ್ಯೆ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಜೈಲು ಮೂಲಗಳಿಂದ ತಿಳಿದು ಬಂದಿದೆ.