ಕರ್ನಾಟಕ

ಗಂಡ ನಾಪತ್ತೆ..ಆತ ಕೆಲಸ ಮಾಡುತ್ತಿದ್ದ ಹೋಟೆಲ್ ಮಾಲೀಕರ ವಿರುದ್ಧ ಪತ್ನಿ ಆರೋಪ..!

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ವ್ಯಕ್ತಿ ನಾಪತ್ತೆಯಾಗಿದ್ದು, ಆತನ ಪತ್ನಿ ಕಣ್ಣೀರು ಹಾಕುತ್ತಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ವ್ಯಕ್ತಿ ನಾಪತ್ತೆಯಾಗಿದ್ದು, ಆತನ ಪತ್ನಿ ಕಣ್ಣೀರು ಹಾಕುತ್ತಿದ್ದಾರೆ. ತನ್ನ ಪತಿ ನಾಪತ್ತೆಯಾಗಿರುವುದಕ್ಕೆ ಆತ ಕೆಲಸ ಮಾಡುತ್ತಿದ್ದ ಹೋಟೆಲ್ ಮಾಲೀಕರ ವಿರುದ್ಧ ಆರೋಪ ಮಾಡಿದ್ದಾರೆ. ಅವರೇ ಏನೋ ಮಾಡಿದ್ದಾರೆ ಎಂದು, ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಗಂಡನ ಬರುವಿಕೆಗಾಗಿ ಕಾಯುತ್ತಿದ್ದಾರೆ.

ಅಕ್ಟೋಬರ್ 20ರಂದು ಹುಲ್ಲಹಳ್ಳಿ ಗ್ರಾಮದ ಮದೀನ ಮಿಲ್ಟ್ರಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಎಂಬುವವರು ನಾಪತ್ತೆಯಾಗಿದ್ದರು. ಅವರ ಪತ್ನಿ ಚಿಕ್ಕಲಮ್ಮ ಹುಡುಕಾಡಿ ಹುಡುಕಾಡಿ ಹೈರಾಣಾಗಿದ್ದರು. ಈ ಬಗ್ಗೆ ಹೋಟೆಲ್ ಮಾಲೀಕರನ್ನು ಕೇಳಿದಾಗ ಸರಿಯಾಗಿ ಸ್ಪಂದಿಸದ ಕಾರಣ, ಅವರೇ ಏನೋ ಮಾಡಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ದೂರು ನೀಡಿ, ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.