ದೇಶ

ಹಿಂದೂ ಸನ್ಯಾಸಿ ಚಿನ್ಮೋಯ್ ದಾಸ್‌ಗಿಲ್ಲ ಬೇಲ್‌.. ಮುಂದುವರಿದ ಸಂಕಷ್ಟ

ಬಾಂಗ್ಲಾದೇಶದ ಢಾಕಾದಿಂದ ಛತ್ತೋಗ್ರಾಮ್‌ಗೆ ತೆರಳಿದ್ದ ಸುಪ್ರೀಂಕೋರ್ಟ್‌ನ 11 ವಕೀಲರ ತಂಡವು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಎಂಡಿ ಸೈಫುಲ್ ಇಸ್ಲಾಂ ವಿಚಾರಣೆ ನಡೆಸಿದ್ದಾರೆ.

ದೇಶದ್ರೋಹದ ಆರೋಪದ ಮೇಲೆ ಬಾಂಗ್ಲಾದೇಶದಲ್ಲಿ ಬಂಧಿರಾಗಿರುವ ಹಿಂದೂ ಸನ್ಯಾಸಿ ಚಿನ್ಮೋಯ್ ದಾಸ್ ಅವರ ಜಾಮೀನು ಅರ್ಜಿಯನ್ನು ಬಾಂಗ್ಲಾದೇಶದ ಛತ್ತೋಗ್ರಾಮ ನ್ಯಾಯಾಲಯ ತಿರಸ್ಕರಿಸಿದೆ. ಛತ್ತೋಗ್ರಾಮ ಮೆಟ್ರೋಪಾಲಿಟನ್ ಸೆಷನ್ಸ್ ಕೋರ್ಟ್‌, ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 25ರಂದು ಬಂಧಿಸಲ್ಪಟ್ಟ ಜೈಲಿನಲ್ಲಿರುವ ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಜಾಮೀನು ಅರ್ಜಿಯನ್ನು ಅಜಾಗೊಳಿಸಿದೆ. ಬಾಂಗ್ಲಾದೇಶದ ಢಾಕಾದಿಂದ ಛತ್ತೋಗ್ರಾಮ್‌ಗೆ ತೆರಳಿದ್ದ ಸುಪ್ರೀಂಕೋರ್ಟ್‌ನ 11 ವಕೀಲರ ತಂಡವು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಎಂಡಿ ಸೈಫುಲ್ ಇಸ್ಲಾಂ ವಿಚಾರಣೆ ನಡೆಸಿದ್ದಾರೆ. ಸುಮಾರು 30 ನಿಮಿಷಗಳ ಕಾಲ ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ಬೇಲ್‌ ನೀಡಲು ತಿರಸ್ಕರಿಸಿದ್ದಾರೆ. ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ಹಲ್ಲೆ ವಿರೋಧಿಸಿ ಹಿಂದೂ ಸನ್ಯಾಸಿ ಚಿನ್ಮೋಯ್ ದಾಸ್ ಹೋರಾಟ ಮಾಡುತ್ತಿದ್ದರು. ಇವರ ಮೇಲೆ ಬಾಂಗ್ಲಾದೇಶ ಸರ್ಕಾರ ದೇಶದ್ರೋಹದ ಪ್ರಕರಣ ದಾಖಲಿಸಿದೆ.