ಕರ್ನಾಟಕ

HDK ಭೇಟಿಯಾದ HMT ಹಾಲಿ ಮತ್ತು ನಿವೃತ್ತ ಉದ್ಯೋಗಿಗಳು..ಬಾಕಿ ಪಾವತಿಗೆ ಮನವಿ ಸಲ್ಲಿಕೆ..!

ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (HMT) ಕಾರ್ಖಾನೆಯ ಹಾಲಿ ಹಾಗೂ ನಿವೃತ್ತ ಉದ್ಯೋಗಿಗಳು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು.

ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (HMT) ಕಾರ್ಖಾನೆಯ ಹಾಲಿ ಹಾಗೂ ನಿವೃತ್ತ ಉದ್ಯೋಗಿಗಳು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು.ಬೆಂಗಳೂರಿನ ಹೆಚ್ ಎಂಟಿ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಉದ್ಯೋಗಿಗಳು; ವೇತನ, ಗ್ರಾಚ್ಯುಟಿ, ಭವಿಷ್ಯ ನಿಧಿ ಪಾವತಿ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.


ಕೇಂದ್ರ ಬೃಹತ್ ಕೈಗಾರಿಕೆ ಸಇವರೊಬ್ಬರನ್ನು ಜೀವನದಲ್ಲಿ ಮೊತ್ತ ಮೊದಲ ಬಾರಿಗೆ ನಾವು ಭೇಟಿಯಾಗುತ್ತಿದ್ದು, ಅದಕ್ಕೆ ಅವಕಾಶ ಕೊಟ್ಟ ನಿಮಗೆ ಧನ್ಯವಾದಗಳು ಎಂದು ಉದ್ಯೋಗಿಗಳು ಹೇಳಿದರು. ಸಚಿವರ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡ ನಿವೃತ್ತ ಉದ್ಯೋಗಿಗಳು, ನಾವು ನಿವೃತ್ತರಾಗಿ ಹಲವಾರು ವರ್ಷಗಳೇ ಕಳೆದಿದ್ದರೂ ನಮಗೆ ದೊರೆಯಬೇಕಾದ ಸೌಲಭ್ಯಗಳು ಇನ್ನೂ ಬಂದಿಲ್ಲ. ಕೆಲವರು ಕಾನೂನು ಹೋರಾಟ ನಡೆಸುತ್ತಿದ್ದು, ಇನ್ನೂ ಅನೇಕ ಉದ್ಯೋಗಿಗಳಿಗೆ ಅದು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ತಾವು ತುರ್ತಾಗಿ ಗಮನ ಹರಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.