ಅರಂತೋಡು : ಸ್ಕೂಟಿ ಹಾಗೂ ಕಂಟೈನರ್ ನಡುವೆ ಭೀಕರ ರಸ್ತೆ ಸಂಭವಿಸಿದ್ದು, ಅಪಘಾತದಲ್ಲಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ನಡೆದಿದೆ.
ಹೌದು, ಗಾಯಗೊಂಡ ವ್ಯಕ್ತಿಯನ್ನು ಕಾಸರಗೋಡಿನ ಜುನೈದ್ ಎಂದು ತಿಳಿದು ಬಂದಿದ್ದು, ಆತನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿಂದೆ. ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟಿ ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿಂದೆ.