ಕರ್ನಾಟಕ

ಕುಂಭಮೇಳದಿಂದ ವಾಸ್‌ ಬರುವ ವೇಳೆ ಭೀಕರ ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ

ಬೀದರ್ ಜಿಲ್ಲೆಯ ಲಾಡಗೇರಿ ಬಡಾವಣೆಯ 12 ನಿವಾಸಿಗಳು ಕ್ರೂಸರ್‌ನಲ್ಲಿ ಪ್ರಯಾಗ್‌ರಾಜ್‌ ಮಹಾಕುಂಭಮೇಳಕ್ಕೆ ತೆರಳಿದ್ದರು. ಪ್ರಯಾಗ್‌ರಾಜ್ ಮುಗಿಸಿ ಕಾಶಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಮಹಾಕುಂಭಮೇಳ ಮುಗಿಸಿ ಅಯೋಧ್ಯೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ 5 ಮಂದಿ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಮಿರಾಜ್‌ಪುರ್ ಬಳಿ ಕ್ರೂಸರ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೀದರ್ ಜಿಲ್ಲೆಯ ಲಾಡಗೇರಿ ಬಡಾವಣೆಯ 12 ನಿವಾಸಿಗಳು ಕ್ರೂಸರ್‌ನಲ್ಲಿ ಪ್ರಯಾಗ್‌ರಾಜ್‌ ಮಹಾಕುಂಭಮೇಳಕ್ಕೆ ತೆರಳಿದ್ದರು. ಪ್ರಯಾಗ್‌ರಾಜ್ ಮುಗಿಸಿ ಕಾಶಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರನ್ನ  ಲಕ್ಷ್ಮೀ (56), ನೀಲಮ್ಮ (55), ಸಂತೋಷ್‌ಕುಮಾರ್ (42), ಸುನೀತಾ (42) ಎಂದು ಗುರುತಿಸಲಾಗಿದೆ. ಇನ್ನೂ ಗಂಭೀರವಾಗಿ ಗಾಯಗೊಂಡವರನ್ನ ಸ್ಥಲೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.