ಬೆಂಗಳೂರು : ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್ ಗುಂಡೂರಾವ್ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಐವಿ ದ್ರಾವಣದ 22 ಬ್ಯಾಚ್ ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಕೇಸ್ ದಾಖಲಿಸಿ ಎಂದು ಸೂಚಿಸಿದರು.
ಅಲ್ಲದೇ ರಾಜ್ಯದ ಡ್ರಗ್ ಕಂಟ್ರೋಲ್ ಟೆಸ್ಟಿಂಗ್ ನಲ್ಲಿ NSQ ವರದಿ ಬಂದ ಮೇಲೆ ಸೆಂಟ್ರಲ್ ಡ್ರಗ್ ಲ್ಯಾಬ್ ನಲ್ಲಿ ಹೇಗೆ SQ ವರದಿ ಬರಲು ಸಾಧ್ಯ ಎಂಬುದರ ಕುರಿತು ಕುಲಂಕುಶವಾಗಿ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಔಷಧಿ ನಿಯಂತ್ರಣ ಅಧಿಕಾರಿಗೆ ಸಚಿವರು ಸೂಚನೆ ನೀಡಿದರು. ಸಮಯಕ್ಕೆ ಸರಿಯಾಗಿ ಔಷಧಿಗಳನ್ನ ಸೂಕ್ತ ರೀತಿಯಲ್ಲಿ ಟೆಸ್ಟಿಂಗ್ ನಡೆಸಿ.. ಜನರ ಜೀವದ ಜೊತೆ ಚೆಲ್ಲಾಟ ಆಡಬೇಡಿ.. ಜವಾಬ್ದಾರಿಯುತವಾಗಿ ನಡೆದುಕೊಳ್ಳುವಂತೆ ಟೆಸ್ಟಿಂಗ್ ನಡೆಸುವ ಅಧಿಕಾರಿಗಳಿಗೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತರಾಟೆ ತೆಗೆದುಕೊಂಡರು.
ಮೊನ್ನೆ ಬಳ್ಳಾರಿಯಲ್ಲಿ 9 ಜನರಿಗೆ ಸಮಸ್ಯೆ ಆಗಿತ್ತು, ನಾಲ್ವರು ತೀರಿಕೊಂಡಿದ್ರು. ಐದನೇವರು ಚಿಕಿತ್ಸೆ ಪಡೀತಿದ್ರು ಅವರೂ ತೀರಿಕೊಂಡಿದ್ದಾರೆ.. ಅವರಿಗೂ ಅದೇ ಬ್ಯಾಚ್ ನ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕೊಡಲಾಗಿತ್ತು. ಇವರಿಗೆ ಬೇರೆ ಆರೋಗ್ಯ ಸಮಸ್ಯೆಯೂ ಇತ್ತು ಅಂತಿದ್ರು..ಗುಣ ಆಗ್ತಿದ್ರು ಅಂತ ವೈದ್ಯರು ಹೇಳ್ತಿದ್ರು, ಆದರೆ ನಿನ್ನೆ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎಂದರು.
ಬಳ್ಳಾರಿಯಲ್ಲಿ ಬಾಣಂತಿಯರ ಸಾವಿಗೆ ಐವಿ ದ್ರಾವಣ ಕೂಡ ಒಂದು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ರೀತಿಯ ವರದಿಗಳಿರುವಾಗ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳು ಏನು ಕ್ರಮ ವಹಿಸಿದ್ದಾರೆ. ಟೆಸ್ಟಿಂಗ್ ವರದಿಗಳನ್ನ ಶೀಘ್ರದಲ್ಲಿ ಕೊಡಬೇಕು. ಟೆಸ್ಟಿಂಗ್ ವರದಿಗಳನ್ನ ನೀಡಲು ವಿಳಂಬ ನೀತಿ ಏಕೆ. ಅಲ್ಲದೇ ಸೆಂಟ್ರಲ್ ಲ್ಯಾಬ್ ನಿಂದ ಕೂಡಾ ಟೆಸ್ಟಿಂಗ್ ವರದಿಗಳು ಬರುವುದು ವಿಳಂಭವಾಗುತ್ತಿರುವುದು ಏಕೆ. ನಿಮಗೆ ಜವಾಬ್ದಾರಿ ಇಲ್ಲವೇ ಎಂದು ಅಧಿಕಾರಿಗಳ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಗರಂ ಆದರು.
ಫಾರ್ಮಾಸ್ಯುಟಿಕಲ್ ಕಂಪೆನಿಗಳನ್ನು ರಕ್ಷಿಸುವ ಕಾನೂನುಗಳಾಗಿ ಹೋಗಿವೆ..ತಪ್ಪು ಮಾಡಿದರೆ ಶಿಕ್ಷೆ ಕೊಡುವಲ್ಲಿ ನಮ್ಮ ಕಾನೂನುಗಳು ವಿಫಲವಾಗಿವೆ..ಬಿಜೆಪಿಯವ್ರು ಲೋಕಾಯುಕ್ತಕ್ಕೆ ಖಂಡಿತ ದೂರು ಕೊಡಲಿ..ಇದರಲ್ಲಿ ವಿಪಕ್ಷದವರ ಸಹಕಾರವೂ ಬೇಕು ಎಂದರು.
ನನ್ನ ತಪ್ಪಿದ್ರೆ ಪ್ರಕರಣದಲ್ಲಿ ನಾನು ರಾಜೀನಾಮೆ ಕೊಡಲೂ ಸಿದ್ಧ..
ಇದರಲ್ಲಿ ನನ್ನ ಪ್ರತಿಷ್ಠೆ ಏನಿಲ್ಲ.ಇದು ಜೀವದ ವಿಚಾರ..ನನ್ನ ರಾಜೀನಾಮೆಯಿಂದ ಸರಿಯಾಗುತ್ತೆ ಅಂದರೆ ರಾಜೀನಾಮೆಗೂ ಸಿದ್ಧ..ಆದರೆ ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ..ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು..ಇಲ್ಲಿವರೆಗೆ ಈ ವರ್ಷ ರಾಜ್ಯದಲ್ಲಿ 327 ಮೆಟರ್ನಲ್ ಸಾವಾಗಿದೆ..ಎಲ್ಲವನ್ನೂ ಪರಿಶೀಲಿಸಿ ಅಂತ ಹೇಳಿದ್ದೇವೆ..ಇಂಥ ಪ್ರಕರಣಗಳಲ್ಲಿ ಸಹನೆ ಇರಬಾರದು, ಕಠಿಣ ಕಾನೂನು ಕ್ರಮ ಆಗಬೇಕು ಎಂದು ತಿಳಿಸಿದರು.