ಕೋಲಾರ: ಸಚಿವ ಸಂಪುಟ ಪುನರ್ ರಚನೆ ಆಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಯಾರ ಮನೆ ಬಾಗಿಲಿಗೂ ಹೋಗಿ ಕೇಳಿಕೊಳ್ಳಲ್ಲ ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹೇಳಿದ್ದಾರೆ. ಒಂದು ವೇಳೆ ಸಚಿವ ಸ್ಥಾನ ಕೊಟ್ಟರೆ ತೆಗೆದುಕೊಳ್ಳುವೆ ಎಂದು ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಸ್ಪಷ್ಟಪಡಿಸಿದರು.
ಕೋಲಾರದ ತಾಲೂಕು ಕಚೇರಿಯಲ್ಲಿ ದರಕಾಸ್ತು ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಸಚಿವ ಸ್ಥಾನದ ಬಗ್ಗೆ ನಾನು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದರು. ರಾಜ್ಯ ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನಮಾನ ಬೇಕೋ ಅವರು ಹೈಕಮಾಂಡ್ ಬಳಿ ಹೋಗುತ್ತಾರೆ. ಸಚಿವ ಸ್ಥಾನ ಕೇಳುವುದು ಅವರ ಜವಾಬ್ದಾರಿ ಎಂದರು.