ಬೆಂಗಳೂರಿನಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ಸಂಚಾರಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ರೂಲ್ಸ್ ಬ್ರೇಕ್ ಮಾಡುವವರ ವಿರುದ್ಧ ಕಾರ್ಯಾಚರಣೆಗಿಳಿದ ಪೊಲೀಸರು, ಕಳೆದ ಒಂದು ವಾರದಲ್ಲಿ 769 ಡಿಡಿ ಪ್ರಕರಣಗಳನ್ನ ದಾಖಲಿ ಮಾಡಿದ್ದರು. ಒಟ್ಟು 60903 ವಾಹನಗಳನ್ನು ಪರಿಶೀಲನೆ ಮಾಡಿದ್ದ ಸಂಚಾರಿ ಪೊಲೀಸರು, ಪ್ರಕರಣ ದಾಖಲಿಸಿ ಡ್ರೈವಿಂಗ್ ಲೈಸೆನ್ಸ್ ರದ್ದಿಗೆ ಆರ್ ಟಿ ಓ ಗೆ ಪತ್ರ ಬರೆದಿದ್ದರು. ಅದೇ ರೀತಿ ಅತಿವೇಗವಾಗಿ ವಾಹನ ಚಲಾಯಿಸುವವರ ವಿರುದ್ಧ ಸಹ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದ 241 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ 2.41 ಲಕ್ಷ ದಂಡ ವಸೂಲಿ ಮಾಡಿದ್ದಾರೆ.