ದೇಶ

ಅಂದು ಮನಮೋಹನ್​ ಸಿಂಗ್​ ಮನೆಯಲ್ಲಿ ಇಫ್ತಾರ್ ಕೂಟ​, ಇಂದು CJI ಮನೆಯಲ್ಲಿ ಮೋದಿ ಗಣೇಶ ಪೂಜೆ..!

ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು 2009 ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ತಮ್ಮ ನಿವಾಸದಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಿದ್ದ ಹಳೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ. '2009ರಲ್ಲಿ ಅಂದಿನ ಸಿಜೆಐ ಕೆ.ಜಿ.ಬಾಲಕೃಷ್ಣನ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರು ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು. ಆಗಲೂ ನ್ಯಾಯಾಂಗ ಸುರಕ್ಷಿತವಾಗಿದೆ, ಈಗಲೂ ನ್ಯಾಯಾಂಗ ಸುರಕ್ಷತಿತವಾಗಿದೆ ಎಂದು ಹೇಳಿದ್ದಾರೆ.

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು  ಪ್ರತಿಪಕ್ಷಗಳು ಟೀಕಿಸುತ್ತಿವೆ. ಈ ಹಿನ್ನಲೆಯಲ್ಲಿ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು 2009 ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ತಮ್ಮ ನಿವಾಸದಲ್ಲಿ ಇಫ್ತಾರ್ ಕೂಟವನ್ನು ಆಯೋಜಿಸಿದ್ದ ಹಳೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ.

'2009ರಲ್ಲಿ ಅಂದಿನ ಸಿಜೆಐ ಕೆ.ಜಿ.ಬಾಲಕೃಷ್ಣನ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರು ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು. ಆಗಲೂ ನ್ಯಾಯಾಂಗ ಸುರಕ್ಷಿತವಾಗಿತ್ತು , ಈಗಲೂ ನ್ಯಾಯಾಂಗ ಸುರಕ್ಷತವಾಗಿದೆ. ಆದರೆ ಇದನ್ನು ಮರೆತ ಪ್ರತಿಪಕ್ಷಗಳು ಪ್ರಧಾನಿ ಮೋದಿ ಪ್ರಸ್ತುತ ಸಿಜೆಐ ಅವರ ಮನೆಯಲ್ಲಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ ವಿರೋಧಿಸುತ್ತಿರುವುದನ್ನ ನೋಡಿದರೆ, ಹಳೆಯದೆಲ್ಲದನ್ನ ಮರೆತು ಈಗ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಅವರು ಹೇಳಿದರು.