ಮಂಗಳೂರು: ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ ಅಯಂಟಿ ಡ್ರಗ್ ಟೀಂ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. 2,04,000 ರೂ ಬೆಲೆಯ 8 ಕೆ.ಜಿ ಗಾಂಜಾ ವಶಪಡಿಸಿಕೊಂಡಿದೆ. ಈ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಯಲ್ಲಿ ನಡೆದಿದೆ.
ಮಾಡೂರು ನಿವಾಸಿ ನಜೀರ್ ಹುಸೈನ್ (50) ಮತ್ತು ಕಿನ್ಯಾ ರೆಹಮತ್ ನಗರದ ಅಫ್ಸಾತ್ (37) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ಪೊಲೀಸ್ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ. ಗಾಂಜಾ ಸಹಿತ ಮಾರಾಟಕ್ಕೆ ಬಳಸಿದ್ದ ಕಾರು ಹಾಗೂ ಎರಡು ಮೊಬೈಲುಗಳನ್ನು ಹಾಗೂ ಒಟ್ಟು ರೂ. 5,14,810 ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರ ವಿರುದ್ಧ 195/2024 ಕಲಂ ನಡಿ ಎನ್ ಡಿಪಿಎಸ್ ಆಕ್ಟ್ 1985 ಮತ್ತು ಬಿಎನ್ ಎಸ್ ಕಾಯಿದೆಗಳಡಿ ಪ್ರಕರಣಗಳು ದಾಖಲಾಗಿವೆ.