ಮಂಡ್ಯ : ರೈಸ್ ಮಿಲ್ ಗಳಲ್ಲಿ ಅಕ್ರಮ ಪಡಿತರ ಅಕ್ಕಿ ಸಂಗ್ರಹ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮಂಡ್ಯದಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ, ಸದಸ್ಯರು ಹಾಗೂ ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಕೃಷ್ಣ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಳಿ ವೇಳೆ ತೆಲಂಗಾಣ ರಾಜ್ಯದ ಪಡಿತರ ಅಕ್ಕಿ ಸಂಗ್ರಹದ ಬಗ್ಗೆ ಅನುಮಾನ ಮೂಡಿದೆ. ಈ ನಿಟ್ಟಿನಲ್ಲಿ ಪರಿಶೀಲನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನಿಡಿದ್ದಾರೆ. ಮಂಡ್ಯದ ಲಕ್ಷ್ಮೀ, ಕಾಳೇಗೌಡ ರೈಸ್ ಮಿಲ್ ಮೇಲೆ ತಡರಾತ್ರಿ ಅಧಿಕಾರಿಗಳು ದಾಳಿ ನಡೆದಿಸಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹ ಮಾಡಿದ್ದಾರೆ ಎಂಬ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಎರಡು ರೈಸ್ ಮಿಲ್ ಗಳಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ಪರಿಶೀಲನೆ ನಡೆಸಿದ್ದಾರೆ.
