ದೇಶ

ಉತ್ತರಾಖಂಡ್‌ನಲ್ಲಿ ಯುಸಿಸಿ ಜಾರಿ; ಯಾರನ್ನೂ ಗರಿಯಾಗಿಸಿಲ್ಲ ಎಂದ ಪುಷ್ಕರ್ ಸಿಂಗ್ ಧಾಮಿ

ಇಂದು, ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿದೆ.. ಇದು ಪ್ರತಿಯೊಬ್ಬ ವ್ಯಕ್ತಿಗೂ ಪ್ರಯೋಜನವನ್ನು ನೀಡುತ್ತದೆ ಎಂದು ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

ಉತ್ತರಾಖಂಡ ಸರ್ಕಾರ ಇಂದಿನಿಂದ ಏಕರೂಪ ನಾಗರಿಕ ಸಂಹಿತೆ (UCC) ಜಾರಿ ಮಾಡಿದೆ.. ಈ ಕಾಯ್ದೆ ತಂದ ದೇಶದಲ್ಲಿಯೇ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.. ಯುಸಿಸಿ ಅನುಷ್ಠಾನದಿಂದ ಜಾತಿ, ಧರ್ಮ, ಲಿಂಗ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ಮಾಡುವ ವೈಯಕ್ತಿಕ ನಾಗರಿಕ ವಿಷಯಗಳಿಗೆ ಸಂಬಂಧಿಸಿದ ಎಲ್ಲ ಕಾನೂನುಗಳನ್ನ ಏಕರೂಪಕ್ಕೆ ತರಲಾಗಿದೆ ಅಂತಾ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ..
ಇಂದು ಯುಸಿಸಿ ಪೋರ್ಟಲ್ ಉದ್ಘಾಟಿಸಿದ ಸಿಎಂ ಪುಷ್ಕರ್ ಸಿಂಗ್ ಧಾಮಿ, ಯುಸಿಸಿ ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ನೀಡುವ ಜೊತೆಗೆ ಸಮಾಜದಲ್ಲಿ ಏಕರೂಪತೆಯನ್ನು ತರುತ್ತದೆ ಎಂದಿದ್ದಾರೆ.

ಯುಸಿಸಿ ಮೂಲಕ ಹಲಾಲ್‌, ಬಹುಪತ್ನಿತ್ವ, ಬಾಲ್ಯ ವಿವಾಹ, ತ್ರಿವಳಿ ತಲಾಖ್ ಮುಂತಾದವುಗಳನ್ನ ಸಂಪೂರ್ಣವಾಗಿ ನಿಲ್ಲಿಸಬಹುದು.. ಏಕರೂಪ ನಾಗರಿಕ ಸಂಹಿತೆ ಯಾವುದೇ ಧರ್ಮ ಅಥವಾ ಪಂಥದ ವಿರುದ್ಧವಲ್ಲ, ಯಾರನ್ನೂ ಗುರಿಯಾಗಿಸುವ ಪ್ರಶ್ನೆಯೇ ಇಲ್ಲ ಎಂದು ನಾನು ಮತ್ತೊಮ್ಮೆ ಸ್ಪಷ್ಟಪಡಿಸಲು ಬಯಸುತ್ತೇನೆ ಎಂದಿದ್ದಾರೆ.."ನಾವು ರಾಜ್ಯದ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುತ್ತಿದ್ದೇವೆ. ಇಂದು, ಉತ್ತರಾಖಂಡವು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಿದೆ.. ಇದು ಪ್ರತಿಯೊಬ್ಬ ವ್ಯಕ್ತಿಗೂ ಪ್ರಯೋಜನವನ್ನು ನೀಡುತ್ತದೆ ಎಂದು ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.