ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಕ್ಯಾಬಿನೆಟ್ ಹಾಲ್‌ನಲ್ಲಿ ಸಭೆ ನಡೆಯಲಿದೆ. ಕ್ಯಾಬಿನೆಟ್‌ನಲ್ಲಿ ಹಲವು ಮಹತ್ವದ ವಿಷಯಗಳ ಚರ್ಚೆ ನಡೆಯಲಿದ್ದು, ಪ್ರಮುಖವಾಗಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ಮಾಡುತ್ತೇವೆ ಎಂದಿದ್ದಾರೆ. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಜಾರಿಯಾಗುವ ಸಾಧ್ಯತೆ ಇದೆ. ಸಚಿವ ಸಂಪುಟ ಸಭೆಯಲ್ಲಿ ದಲಿತ ಸಚಿವರು ಒಳ ಮೀಸಲಾತಿಯ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ.
ಯಾವೆಲ್ಲಾ ವಿಚಾರಗಳ ಚರ್ಚೆ :
- ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗಳ ಸಿದ್ಧತೆ
- ಅನಧಿಕೃತ ನಿವೇಶನಗಳಿಗೆ ಬಿ- ಖಾತೆ ನೀಡುವುದಕ್ಕೆ ಒಪ್ಪಿಗೆ..
- ಘಟನೋತ್ತರ ಅನುಮೋದನೆ ನೀಡುವ ಸಾಧ್ಯತೆ..
- ಕುಡಿಯುವ ನೀರಿನ ಯೋಜನೆಗಳಿಗೆ ಅನುಮತಿ..?
- ಜಲಜೀವನ್ ಮಿಷನ್ ಅನುಷ್ಠಾನದ ಬಗ್ಗೆ ಚರ್ಚೆ
- ಒಳ ಮೀಸಲಾತಿಯ ಬಗ್ಗೆಯೂ ಪ್ರಸ್ತಾಪ ಸಾಧ್ಯತೆ