ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ್ದ ಭಾರತೀಯರನ್ನ ಗಡಿಪಾರು ಮಾಡಲಾಗಿದೆ. ಅಮೆರಿಕ ಅಧ್ಯಕ್ಷರಾಗುತ್ತಿದ್ದಂತೆ ಡೊನಾಲ್ಡ್ ಟ್ರಂಪ್ ಕನಸಿನ ಯೋಜನೆಯಂತೆ ಅಮೆರಿಕದಲ್ಲಿ ನೆಲೆಸಿದ್ದ ಅಕ್ರಮ ವಲಸಿಗರ ಗಡಿಪಾರು ಮಾಡುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ವಲಸಿಗರನ್ನು ಹೊತ್ತ C-17 ಅಮೆರಿಕ ಸೇನಾ ವಿಮಾನ ಭಾರತಕ್ಕೆ ಆಗಮಿಸುತ್ತಿದೆ ಎಂದು ವರದಿಯಾಗಿದೆ. ಬಂಧಿತ ವಲಸಿಗರನ್ನು ಮಿಲಿಟರಿ ವಿಮಾನಗಳ ಮೂಲಕ ಅಮೆರಿಕದಿಂದ ಹೊರಗೆ ಕಳುಹಿಸಲಾಗುತ್ತಿದೆ. ಟೆಕ್ಸಾಸ್‌ನ ಎಲ್ ಹಾಸೊ ಮತ್ತು ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋದಲ್ಲಿ ಬಂಧನಕ್ಕೊಳಗಾದ 5 ಸಾವಿರಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಸೇನಾ ವಿಮಾನಗಳ ಮೂಲಕ ಗಡಿಪಾರು ಮಾಡಲಾಗುತ್ತಿದೆ. ಮೂಲಗಳ ಪ್ರಕಾರ ಅಮೆರಿಕ ಸುಮಾರು 18 ಸಾವಿರ ಅಕ್ರಮ ವಲಸಿಗರನ್ನು ಭಾರತಕ್ಕೆ ಗಡಿಪಾರು ಮಾಡಲು ಗುರುತಿಸಿದೆ ಎನ್ನಲಾಗಿದೆ.