ಕರ್ನಾಟಕ

ವಾಲ್ಮೀಕಿ ಸಮುದಾಯಕ್ಕೆ ಅಪಮಾನ ; ಸಮುದಾಯದ ಗುರುಗಳ ಪುತ್ಥಳಿ ಕದ್ದೊಯ್ದ ಕಿಡಿಗೇಡಿಗಳು

ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ವಾಲ್ಮೀಕಿ ಗುರುಗಳ ಪುತ್ಥಳಿಯನ್ನ ಕಳ್ಳತನ ಮಾಡಲಾಗಿದ್ದು, ಕೊರಟಗೆರೆ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ತುಮಕೂರು : ಗೃಹ ಸಚಿವರ ಸ್ವಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಅಪಮಾನ ಮಾಡುವಂತ ಘಟನೆಯೊಂದು ಸಂಭವಿಸಿದೆ. ವಾಲ್ಮೀಕಿ ಜಯಂತಿ ದಿನದಂದೇ ವಾಲ್ಮೀಕಿ ಗುರುಗಳ ಪುತ್ಥಳಿಯನ್ನ  ಕಿಡಿಗೇಡಿಗಳು ಕದ್ದೊಯ್ದಿದ್ದಾರೆ. 

ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ವಾಲ್ಮೀಕಿ  ಗುರುಗಳ  ಪುತ್ಥಳಿಯನ್ನ ಕಳ್ಳತನ ಮಾಡಲಾಗಿದ್ದು, ಕೊರಟಗೆರೆ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ನಾಯಕರು ಪ್ರತಿಭಟನೆ ನಡೆಸಿದ್ದಾರೆ. 

ಮಹಿಳೆಯರು ಸೇರಿದಂತೆ ನೂರಾರು ವಾಲ್ಮೀಕಿ ಸಮುದಾಯದ ಜನರು ಧರಣಿ ನಡೆಸಿದ್ದು, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸ್ಥಳಕ್ಕೆ ತುಮಕೂರು ಎಸ್.ಪಿ ಅಶೋಕ್ ಕೆ.ವಿ, ಹಾಗೂ ಎಎಸ್ ಪಿ ಮರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದ್ದೇಶ ಪೂರ್ವಕವಾಗಿ ಈ ಕೃತ್ಯ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದ್ದು, ಕೂಡಲೇ ಕಿಡಿಗೇಡಿಗಳನ್ನ ಬಂಧಿಸುವಂತೆ ಸಮುದಾಯದ ಮುಖಂಡರು ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.