ವಿದೇಶ

ಹಿಜ್ಬುಲ್ಲಾ ಉಗ್ರ ಸಂಘಟನೆಯ ವಾರಸುದಾರ, ಧರ್ಮಗುರು ಸಫೈದ್ದೀನ್‌ ಹತ್ಯೆ ಮಾಡಿದ ಇಸ್ರೇಲ್!

ಅಕ್ಟೋಬರ್‌ ಆರಂಭದಲ್ಲಿ ನಡೆಸಿದ ದಾಳಿಯಲ್ಲಿ ಸಫೈದ್ದೀನ್‌ ಸೇರಿದಂತೆ 25 ಹಿಜ್ಬುಲ್ಲಾ ನಾಯಕರು ಹತರಾಗಿರುವುದಾಗಿ ಇಸ್ರೇಲ್‌ ತಿಳಿಸಿದೆ.

ಬೈರೂತ್‌: ಬೈರೂತ್ನ ಹೊರಭಾಗದಲ್ಲಿ ಇಸ್ರೇಲ್ ಸೇನೆ ನಡೆಸಿದ ವಾಯುದಾಳಿಯಲ್ಲಿ, ಹಿಜ್ಬುಲ್ಲಾ ಉಗ್ರ ಸಂಘಟನೆಯ ಮುಂದಿನ ಮುಖ್ಯಸ್ಥ ಎಂದೇ ಬಿಂಬಿತನಾಗಿದ್ದ ಧರ್ಮಗುರು ಹಾಶಿಮ್‌ ಸಫೈದ್ದೀನ್‌ ಹತ್ಯೆಯಾಗಿದ್ದಾನೆ ಎಂದು ಇಸ್ರೇಲ್‌ ಸೇನೆ ಮಂಗಳವಾರ ಖಚಿತಪಡಿಸಿದೆ. 

ಆದರೆ ಈ ಸುದ್ದಿನ್ನು ಹಿಜ್ಬುಲ್ಲಾ ಸಂಘಟನೆ ಇನ್ನು ಖಚಿತಪಡಿಸಿಲ್ಲ. ಅಕ್ಟೋಬರ್‌ ಆರಂಭದಲ್ಲಿ ನಡೆಸಿದ ದಾಳಿಯಲ್ಲಿ ಸಫೈದ್ದೀನ್‌ ಸೇರಿದಂತೆ 25 ಹಿಜ್ಬುಲ್ಲಾ ನಾಯಕರು ಹತರಾಗಿರುವುದಾಗಿ ಇಸ್ರೇಲ್‌ ತಿಳಿಸಿದೆ.