ದೇಶ

ಇಸ್ರೇಲ್​ ರಾಯಭಾರಿ ರುವೆನ್​ ಮತ್ತು ಅವರ ಪತ್ನಿ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ.

ಇಸ್ರೇಲ್​ ರಾಯಭಾರಿ ರುವೆನ್​ ಅಜರ್​ ಅವರು ಬುಧವಾರ ತಮ್ಮ ಪತ್ನಿಯೊಂದಿಗೆ ಅಯೋಧ್ಯ ರಾಮಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆದಿದ್ದಾರೆ.

ಅಯೋಧ್ಯೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್ ಅವರು ಬುಧವಾರ ತಮ್ಮ ಪತ್ನಿಯೊಂದಿಗೆ ಅಯೋಧ್ಯ ರಾಮಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆದಿದ್ದಾರೆ. ಮಂಗಳವಾರ ಲಖನೌನಲ್ಲಿ ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ರುವೆನ್ ಬುಧವಾರ ಆಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿದರು.

ರಾಮಮಂದಿರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ರುವೆನ್ ಅಜರ್, ದೇವಾಲಯಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ನೋಡಿ ಅಚ್ಚರಿಗೊಂಡಿದ್ದೇನೆ, ಅಲ್ಲದೇ ಇಲ್ಲಿನ ಜನರೊಂದಿಗೆ ಸಂಪರ್ಕ ಸಾಧಿಸುವ ಹಾಗೂ ಭಾರತದ ಸಂಸ್ಕೃತಿಯನ್ನು ಅಳವಾಗಿ ಅನ್ವೇಷಿಸುವ ಮಹತ್ವವನ್ನು ಅವರು ಒತ್ತಿ ಹೇಳಿದರು. ಅಯೋಧ್ಯೆಯಯಲ್ಲಿ ಭವ್ಯವಾದ ರಾಮ ಮಂದಿರಕ್ಕೆ ಭೇಟಿ ಮಾಡುವ ಅವಕಾಶ ಸಿಕ್ಕಿದ್ದು, ನನಗೆ ಸಿಕ್ಕ ಗೌರವ ಎಂದರು.