ದೇಶ

ಇಸ್ರೋ ಸೋಮನಾಥ್‌ಗೆ ವಿಶ್ವಬಾಹ್ಯಾಕಾಶ ಪ್ರಶಸ್ತಿ

ಈ ಹಿಂದೆ ಯಾರೂ ಇಳಿಯದ ಚಂದ್ರನ ದಕ್ಷಿಣ ಭಾಗಕ್ಕೆ ISRO ತಲುಪಿದ್ದು ಜಾಗತಿಕ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ಬೆಂಗಳೂರು: ಕಳೆದ ವರ್ಷ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆ ಯಶಸ್ವಿಯಾದ ಕಾರಣ ಅಧ್ಯಕ್ಷ ಎಸ್.ಸೋಮನಾಥ್ ಅವರಿಗೆ ಅಂತಾರಾಷ್ಟ್ರೀಯ ಖಗೋಳಶಾಸ್ತ್ರೀಯ ಒಕ್ಕೂಟವು (ಐಎಎಫ್) ವಿಶ್ವ ಬಾಹ್ಯಾಕಾಶ ಪ್ರಶಸ್ತಿ ನೀಡಿ ಗೌರವಿಸಿದೆ. ಚಂದ್ರಯಾನ-3, ಕಡಿಮೆ ಖರ್ಚಿನ ತಂತ್ರಜ್ಞಾನ ಸದ್ಬಳಕೆ, ಈ ಹಿಂದೆ ಯಾರೂ ಇಳಿಯದ ಚಂದ್ರನ ದಕ್ಷಿಣ ಭಾಗಕ್ಕೆ ISRO ತಲುಪಿದ್ದು ಜಾಗತಿಕ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಹೀಗಾಗಿ ಇಸ್ರೋ ಮುಖ್ಯಸ್ಥ ಎಸ್.ಸೋಮನಾಥ್ ಅವರಿಗೆ ವಿಶ್ವ ಬಾಹ್ಯಾಕಾಶ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ಎಂದು ಐಎಎಫ್ ಹೇಳಿದೆ ಎಂದು ಇಸ್ರೋ ತಿಳಿಸಿದೆ.