ಕರ್ನಾಟಕ

ಕುಮಾರಸ್ವಾಮಿಯವರಿಗೆ ಅವರ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ : ಡಿಸಿಎಂ ಡಿಕೆ ಶಿವಕುಮಾರ್

ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನರಿಗೆ ಒಳ್ಳೆಯದಾಗಲು ಸಾಧ್ಯ ಎಂದು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ರಾಮನಗರ: ಕುಮಾರಸ್ವಾಮಿಯವರಿಗೆ ತನ್ನ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್,  ಕುಮಾರಸ್ವಾಮಿಯವರಿಗೆ ಅವರ ಸ್ಥಾನವನ್ನೇ ಉಳಿಸಿಕೊಳ್ಳುವುದು ಕಷ್ಟವಾಗಿದೆ. ಬಿಜೆಪಿ ನಾಯಕರೇ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುತ್ತಾರೆ. ಅವರ ಪಕ್ಷ ಗಟ್ಟಿಯಾಗಿ ಉಳಿಯುತ್ತದೆಯೋ ಇಲ್ಲವೋ ಎಂಬುದನ್ನು ಸಮಯ ಬಂದಾಗ ಉತ್ತರ ನೀಡುತ್ತೇನೆ ಎಂದರು.

 ಬಿಜೆಪಿಯಲ್ಲಿ ಕುಮಾರಸ್ವಾಮಿಯವರನ್ನ ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಎಂಬುದು ನನಗೆ ಚೆನ್ನಾಗಿ ಗೊತ್ತಿದೆ. ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಭವಿಷ್ಯವಿಲ್ಲ. ಹಾಗಾಗಿ ಗುಂಪು ಗುಂಪಾಗಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರುತ್ತಿದ್ದಾರೆ. ಎಲ್ಲೋ ಹಳ್ಳಿಗಳಲ್ಲಿ ಭಿನ್ನಾಭಿಪ್ರಾಯದಿಂದ ಒಂದಿಬ್ಬರು ಮಾತ್ರ ನಮ್ಮ ಪಕ್ಷ ಬಿಟ್ಟಿರಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿಪಕ್ಷಗಲ ವಿರುದ್ಧ ಲೇವಡಿ ಮಾಡಿದರು.

ಇನ್ನೂ ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನರಿಗೆ ಒಳ್ಳೆಯದಾಗಲು ಸಾಧ್ಯ ಎಂದು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಎಂದರು.