ಕರ್ನಾಟಕ

ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆಯಾರ್ಭಟ..!

ಆಗಸ್ಟ್ 27 ರಿಂದ ಆಗಸ್ಟ್ 31ರವರೆಗೆ ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣಾರ್ಭಟ ಮುಂದುವರೆಯಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಬೆಂಗಳೂರು ; ಬೆಂಗಳೂರು ಸೇರಿದಂತ ರಾಜ್ಯದ ವಿವಿಧ ಜಿಲ್ಲೆಯಗಳಲ್ಲಿ ಇಂದಿನಿಂದ ಮತ್ತೆ ಮಳೆಯಾರ್ಭಟ ಜೋರಾಗಲಿದೆ. ಇಂದಿನಿಂದ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 27 ರಿಂದ ಆಗಸ್ಟ್ 31ರವರೆಗೆ ಕರಾವಳಿ, ಮಲೆನಾಡು ಭಾಗಗಳಲ್ಲಿ ವರುಣಾರ್ಭಟ ಮುಂದುವರೆಯಲಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಬೇರೆ-ಬೇರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಆಗಸ್ಟ್ 28ರಿಂದ ಮಳೆಯಾರ್ಭಟ ತಗ್ಗಲಿದ್ದು, ಕೆಲ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಲಿದೆ. ಇನ್ನೂ ರಾಯಚೂರು, ಬಳ್ಳಾರಿ, ಯಾದಗಿರಿ, ಗುಲ್ಬರ್ಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಮಳೆಯ ನಿರೀಕ್ಷೆಯಲ್ಲಿದ್ದ ಉತ್ತರ ಕರ್ನಾಟ ಭಾಗದ ಜನರಿಗೆ ಭಾರಿ ನಿರಾಸೆಯಾಗಿದೆ.