ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಬರ್ತಾರೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರಕ್ಕೆ, ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೆ ಎನ್ನುವುದು ಅವರಿಗೆ ಬಿಟ್ಟಂತ ವಿಚಾರ. ನನ್ನ ರಾಜಕೀಯ ಅನುಭವದ ಮೇಲೆ ಹೇಳುವುದಾದರೆ, ಮುಡಾ ಪ್ರಕರಣ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗ್ತಿದೆ. ತಪ್ಪು ಮಾಡಿರೋದು ಗೊತ್ತಿದೆ. ಲೋಕಾಯುಕ್ತ ತನಿಖೆ ಆಗ್ತಿದೆ. ಇಷ್ಟಾದ್ರು ಮುಖ್ಯಮಂತ್ರಿ ಆಗಿ ಮುಂದುವರೆದಿರೋ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.
ಅಲ್ಲದೇ ಇದು ಬಂಡತನದ ಪರಮಾವಧಿ.ರಾಜಕೀಯವಾಗಿ ನಾಲ್ಕು ದಿನ ವಿಳಂಬ ಆಗಬಹುದು. ಆದ್ರೆ ಇವತ್ತಲ್ಲ ನಾಳೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಹೊಸ ಸಿಎಂ ಯಾರು ಅನ್ನೋದು ಕಾಂಗ್ರೆಸ್ ಗೆ ಬಿಟ್ಟ ವಿಚಾರ. ಈ ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ರೀತಿಯ ಆಪರೇಷನ್ ಕಮಲ ಮಾಡ್ತಿಲ್ಲ. ಅವರ ಸ್ವಯಂಕೃತ ಅಪರಾಧದಿಂದ ಸರ್ಕಾರ ಬಿದ್ದು ಹೋಗಲಿದೆ ಎಂದಿದ್ದಾರೆ.