ಕ್ರೀಡೆಗಳು

ಟೆಸ್ಟ್‌ ರ‍್ಯಾಂಕಿಂಗ್… ಅಶ್ವಿನ್‌ ದಾಖಲೆ ಸರಿಗಟ್ಟಿದ ಜಸ್ಪ್ರೀತ್‌ ಬುಮ್ರಾ

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೂರ್ನಿಯಲ್ಲಿ ಮಾರಕ ಬೌಲಿಂಗ್‌ ದಾಳಿ ನಡೆಸುತ್ತಿರುವ ಬುಮ್ರಾ ಟೆಸ್ಟ್‌ ಬೌಲಿಂಗ್‌ ರ‍್ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ದುಬೈ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೂರ್ನಿಯಲ್ಲಿ ಮಾರಕ ಬೌಲಿಂಗ್‌ ದಾಳಿ ನಡೆಸುತ್ತಿರುವ ಬುಮ್ರಾ ಟೆಸ್ಟ್‌ ಬೌಲಿಂಗ್‌ ರ‍್ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಇದೇ ವೇಳೆ ಅಶ್ವಿನ್‌ ಹೆಸರಿನಲ್ಲಿದ್ದ ದಾಖಲೆಯನ್ನೂ ಸರಿಗಟ್ಟಿದಾರೆ.

ಐಸಿಸಿ ಬಿಡುಗಡೆ ಮಾಡಿರುವ ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ಜಸ್ಪ್ರೀತ್‌ ಬುಮ್ರಾ 904 ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ 21 ವಿಕೆಟ್‌ ಪಡೆಯುವ ಮೂಲಕ ರೇಟಿಂಗ್‌ ಪಾಯಿಂಟ್‌ ಅನ್ನು 904 ಕ್ಕೆ ಏರಿಸಿಕೊಂಡಿದಾರೆ. ಈ ಮೂಲಕ 2016 ರಲ್ಲಿ ರವಿಚಂದ್ರನ್‌ ಅಶ್ವಿನ್‌ ನಿರ್ಮಿಸಿದ್ದ ದಾಖಲೆಯನ್ನು ಸರಿಗಟ್ಟಿದಾರೆ. 2016 ರಲ್ಲಿ ಅಶ್ವಿನ್‌ 904 ಪಾಯಿಂಟ್‌ ಪಡೆಯುವ ಮೂಲಕ ಟೆಸ್ಟ್‌ ಬೌಲರ್‌ ರ‍್ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಪಡೆದಿದ್ದರು.

ಇನ್ನು ಟೆಸ್ಟ್‌ ಬೌಲರ್‌ ರ‍್ಯಾಂಕಿಂಗ್ ನಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ 856 ಪಾಯಿಂಟ್‌ ಪಡೆದಿದ್ದಾರೆ. ಆಸ್ಟ್ರೇಲಿಯಾದ ಜೋಶ್‌ ಹ್ಯಾಜಲ್‌ವುಡ್‌ ಮೂರನೇ ಸ್ಥಾನದಲ್ಲಿದ್ದಾರೆ.

ಬ್ಯಾಟರ್‌ಗಳ ಪಟ್ಟಿಯಲ್ಲಿ ಜೋ ರೂಟ್‌ ಅಗ್ರಸ್ಥಾನದಲ್ಲಿದ್ದರೆ, ಭಾರತ ತಂಡದ ಯಶಸ್ವಿ ಜೈಸ್ವಾಲ್‌ 1 ಸ್ಥಾನ ಇಳಿಕೆ ಕಂಡು ಐದನೇ ಸ್ಥಾನ ಪಡೆದಿದ್ದಾರೆ. ರಿಷಭ್‌ ಪಂತ್‌ 11 ಮತ್ತು ಶುಭಮಾನ್‌ ಗಿಲ್‌ 20 ನೇ ಸ್ಥಾನಕ್ಕೆ ಕುಸಿದಿದ್ದಾರೆ.