ಕ್ರೀಡೆಗಳು

ಪರ್ತ್‌ ಟೆಸ್ಟ್‌ನಲ್ಲಿ ಐತಿಹಾಸಿಕ ಜಯ… ಟೆಸ್ಟ್‌ ರ‍್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದ ಬುಮ್ರಾ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ಗಳಿಸಿತ್ತು. ಈ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ಟೆಸ್ಟ್‌ ಕ್ರಿಕೆಟ್‌ ರ‍್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದಾರೆ.

ದುಬೈ: ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ಗಳಿಸಿತ್ತು. ಈ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ಟೆಸ್ಟ್‌ ಕ್ರಿಕೆಟ್‌ ರ‍್ಯಾಂಕಿಂಗ್ ನಲ್ಲಿ ಅಗ್ರಸ್ಥಾನಕ್ಕೇರಿದಾರೆ.

ಬೌಲಿಂಗ್‌ ವಿಭಾಗದಲ್ಲಿ ಬುಮ್ರಾ ಅಗ್ರಸ್ಥಾನಕ್ಕೇರಿದಂತೆಯೇ ಮೊದಲ ಟೆಸ್ಟ್‌ ನಲ್ಲಿ ಆಕರ್ಷಕ ಆಟವಾಡಿದ ಯಶಸ್ವಿ ಜೈಸ್ವಾಲ್‌ ಸಹ  ಎರಡು ಸ್ಥಾನ ಬಡ್ತಿ ಪಡೆದಿದ್ದು 825 ರೇಟಿಂಗ್‌ ಪಾಯಿಂಟ್‌ನೊಂದಿಗೆ ಎರಡನೇ ಸ್ಥಾನಕ್ಕೇರಿದಾರೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ಸರಣಿಯಲ್ಲಿ ಶ್ರೇಷ್ಠ ಬೌಲಿಂಗ್ಪ್ರದರ್ಶನ ತೋರಿದ್ದ ವೇಳೆ ಜಸ್ಪ್ರೀತ್ಬುಮ್ರಾ ಅಗ್ರಸ್ಥಾನಕ್ಕೇರಿದ್ದರು. ಇದಾದ ಬಳಿಕ ನ್ಯೂಜಿಲ್ಯಾಂಡ್ವಿರುದ್ಧದ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾದ ಕಾರಣ ಅಗ್ರಸ್ಥಾನದಿಂದ ಕೆಳಗಿಳಿದು ಮೂರನೇ ಸ್ಥಾನ ಪಡೆದಿದ್ದರು. ಇದೀಗ ಮತ್ತೆ ಅಗ್ರಸ್ಥಾನಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ 2 ನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾದ ಜೋಶ್‌ ಹ್ಯಾಜಲ್‌ವುಡ್‌ 3 ನೇ ಸ್ಥಾನದಲ್ಲಿದಾರೆ. ಟೀಂ ಇಂಡಿಯಾದ ಸ್ಪಿನ್ನರ್‌ ಆರ್‌. ಅಶ್ವಿನ್‌ 4 ನೇ ಸ್ಥಾನ ಪಡೆದಿದಾರೆ.

ಇನ್ನು ಪರ್ತ್‌ ಟೆಸ್ಟ್‌ ನಲ್ಲಿ ಆಕರ್ಷಕ ಶತಕ ಸಿಡಿಸಿದ್ದ ವಿರಾಟ್‌ ಕೊಹ್ಲಿ ಬ್ಯಾಟಿಂಗ್‌ ವಿಭಾಗದಲ್ಲಿ 9 ಸ್ಥಾನ ಬಡ್ತಿ ಪಡೆಯುವ ಮೂಲಕ 13 ನೇ ಸ್ಥಾನಕ್ಕೇರಿದಾರೆ. ಉಳಿದಂತೆ ರಿಷಭ್‌ ಪಂತ್‌ 6 ನೇ ಸ್ಥಾನದಲ್ಲಿ ಮುಂದುವರೆದಿದಾರೆ.

ಆಲ್ರೌಂಡರ್ಗಳ ಪಟ್ಟಿಯಲ್ಲಿ ಭಾರತೀಯರಾದ ರವೀಂದ್ರ ಜಡೇಜಾ(423) ಮತ್ತು ಆರ್‌.ಅಶ್ವಿನ್‌(290) ಹಿಂದಿನಂತೆ ಕ್ರಮವಾಗಿ ಮೊದಲೆಡರು ಸ್ಥಾನದಲ್ಲಿ ಮುಂದುವರಿದಿದ್ದಾರೆ.‌