ಜಯಮಾಲ ಹೆಚ್.ಎಂ ರಾಮಚಂದ್ರ ಅವರ ಪುತ್ರಿ ಸೌಂದರ್ಯ ವಿವಾಹ ರುಷಭ್ ಅವರೊಂದಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು.
ಕಿಚ್ಚ ಸುದೀಪ್, ಯಶ್, ಗಣೇಶ್, ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು, ನಿರ್ಮಾಪಕರು, ನಿರ್ದೇಶಕರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ವಿವಾಹ ಮಹೋತ್ಸವಕ್ಕೆ ಆಗಮಿಸಿ ವಧುವರರಿಗೆ ಶುಭ ಕೋರಿದರು.