ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಡುಗೋಡಿ ಬಳಿಯ ಸಿಟಿ ಲೇಔಟ್‌ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಥವನ್ ರೆಡ್ಡಿ ಎಂಬ 2 ವರ್ಷದ ಮಗು ಮೃತಪಟ್ಟಿದೆ.
ರಸ್ತೆಯಲ್ಲಿ ಆಟವಾಡುತ್ತಿದ್ದ ಥನವ್ ರೆಡ್ಡಿ ತಲೆಯ ಮೇಲೆ ಜೆ.ಸಿ.ಬಿ ಹರಿದಿದ್ದು, ಕೂಡಲೇ ಗಾಯಗೊಂಡ ಮಗುವನ್ನು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನೆ ಮಾಡಲಾಗಿತ್ತು. ಆದರೆ ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.
ಇನ್ನೂ ಜೆಸಿಬಿ ಚಾಲಕ ವಾಹನವನ್ನು ಅತೀವೇಗ ಮತ್ತು ಅಜಾಗರೂಕತೆಯ ಚಾಲನೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.