ಕರ್ನಾಟಕ

ರಂಗೇರಿದ ಚನ್ನಪಟ್ಟಣ ಅಖಾಡ..ಅಲ್ಪಸಂಖ್ಯಾತ ಮತಗಳ ಮೇಲೆ ಕಣ್ಣಿಟ್ಟ ದಳಪತಿ..!

ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದೆ. ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿರುವ ನಿಖಿಲ್ ಕುಮಾರಸ್ವಾಮಿ, ಪ್ರಚಾರ ಭರಾಟೆ ಮುಂದುವರಿಸಿದ್ದಾರೆ. ಇತ್ತ ಪುತ್ರನ ಗೆಲುವಿಗಾಗಿ ಪಣ ತೊಟ್ಟಿರುವ ಹೆಚ್​ ಡಿಕೆ ಅಲ್ಪಸಂಖ್ಯಾತ ಮತಗಳ ಮೇಲೆ ಕಣ್ಣಿಟ್ಟು, ಪ್ರಚಾರ ನಡೆಸುತ್ತಿದ್ದಾರೆ.

ಚನ್ನಪಟ್ಟಣದಲ್ಲಿ ಉಪಚುನಾವಣಾ ಚಟುವಟಿಕೆ ಗರಿಗೆದರಿದೆ. ನಾಲ್ಕನೇ ದಿನವೂ ನಿಖಿಲ್ ಕುಮಾರಸ್ವಾಮಿ ಪ್ರಚಾರ ಜೋರಾಗಿ ನಡೆಯುತ್ತಿದೆ. ಇತ್ತ ಪುತ್ರನ ಪರ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಪ್ರಚಾರ ನಡೆಸುತ್ತಿದ್ದಾರೆ. ಅಲ್ಪ ಸಂಖ್ಯಾತ ಮತಹಳ ಮೇಲೆ ಕಣ್ಣಿಟ್ಟಿರುವ ಹೆಚ್ ಡಿಕೆ ಇಂದು, ಇಡೀ ದಿನ ಚನ್ನಪಟ್ಟಣ ಟೌನ್ ವ್ಯಾಪ್ತಿಯ ಅಲ್ಪಸಂಖ್ಯಾತರ ವಾರ್ಡ್ಗಳಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಚನ್ನಪಟ್ಟಣ ಟೌನ್ ವ್ಯಾಪ್ತಿಯ ಆದಿಲ್ ಷಾ ಸರ್ಕಲ್, ಟಿಪ್ಪುನಗರ, ಸೈಯದ್ ವಾಡಿ ಸರ್ಕಲ್, ಮದೀನ ಚೌಕ್, ಬೀಡಿ ಕಾಲೊನಿ ಸೇರಿ 11 ಕಡೆಗಳಲ್ಲಿ ಪ್ರಚಾರ ಮಾಡಲು ಮುಂದಾಗಿದ್ದಾರೆ. ಮಾಜಿ ಎಂಎಲ್ಸಿ ಬಿ.ಎಂ.ಫಾರೂಖ್, ಜೆಡಿಎಸ್ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಜಫ್ರುಲ್ಲಾ ಖಾನ್, ಬಿಜೆಪಿ ಮುಖಂಡ ಅಬ್ಬಾಸ್ ಆಲಿ ಬೋಹ್ರಾ ಸೇರಿ ಸ್ಥಳೀಯ ಜೆಡಿಎಸ್, ಬಿಜೆಪಿ ಮುಖಂಡರ ಜೊತೆ ಪ್ರಚಾರ ಮಾಡುವ ಮೂಲಕ, ಕಾಂಗ್ರೆಸ್ ಮತ ಬುಟ್ಟಿಗೆ ಕೈ ಹಾಕಿದ್ದಾರೆ.

ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕೂಡ ಇಂದು ಅಕ್ಕೂರು ಜಿಲ್ಲಾಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲು ಸಜ್ಜಾಗಿದ್ದಾರೆ. ಇಗ್ಗಲೂರು ಸೋಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಲಿರುವ ನಿಖಿಲ್, ಇಗ್ಗಲೂರು, ಮಾರೇಗೌಡನ ದೊಡ್ಡಿ, ಗುಡಿ ಸರಗೂರು ಸೇರಿದಂತೆ ಇಂದು 10ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಸ್ಥಳೀಯ ಮುಖಂಡರು ಸಾಥ್ ನೀಡಲಿದ್ದಾರೆ