ಹುಬ್ಬಳ್ಳಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್ ಆಗಿದ್ದವು. ಈ ವಿಚಾರದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ಈ ಬಗ್ಗೆ ಸಂತೋಷ್ ಲಾಡ್ ಅವರು ಮಾತಾನಾಡಿ, ದರ್ಶನ್ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಫೋಟೋಗಳು ವೈರಲ್ ಆಗಿರುವಹಿಂದೆ ಪ್ರಹ್ಲಾದ್ ಜೋಶಿ ಅವರದ್ದೇ ಕೈವಾಡ ಇರಬಹುದು ಎಂದು ಜೋಶಿಗೆ ತಿರುಗೇಟು ನೀಡಿದ್ಧಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಫೋಟೋಗಳು ವೈರಲ್ ಆಗಿರುವ ವಿಚಾರದಲ್ಲಿ ಆರೋಪ ಮಾಡುತ್ತಿರುವ ಪ್ರಹ್ಲಾದ್ ಜೋಶಿ ಅವರದ್ದೇ ಕೈವಾಡ ಇರಬಹುದು. ಇಷ್ಟು ನಿಖರವಾಗಿ ಫೋಟೋ ಬಿಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ ಅಂದ್ರೆ ಅವರಿಗೆ ಮಾಹಿತಿ ಇರಬೇಕು ಎಂದು ಕುಟುಕಿದರು.