ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಹೂಡಾ ಬಿ ಗ್ರಾಮದಲ್ಲಿ ಕಲಷಿತ ನೀರು ಸೇವಿಸಿ ಮಗು ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡ ದುರ್ಘಟನೆಯೊಂದು ನಡೆದಿದೆ. ಗ್ರಾಮಕ್ಕೆ ಸರಬರಾಜು ಮಾಡುವ ನೀರು ಕಲುಷಿತಗೊಂಡು ಹಲವರು ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.
ಘಟನೆ ಹಿನ್ನೆಲೆ, ಚಿಕಿತ್ಸೆ ಫಲಿಸದೇ 5 ವರ್ಷದ ಮಗುವೊಂದು ಮೃತಪಟ್ಟಿದ್ದು, ಗ್ರಾಮದ ಜನರು ಸ್ಥಳೀಯ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ನೀರು ಸರಬರಾಜು ಮಾಡಿದ ಸಿಬ್ಬಂದಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.