ಕಲಬುರಗಿ : ತಾಲೂಕಿನ ಹಸನಾಪುರ ಗ್ರಾಮದ ಬಳಿ ಭೀಕರ ಅಪಘಾತಯೊಂದು ಸಂವಿಸಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಬೈಕ್, ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿತು. ಬೈಕ್ ಹಾಗೂ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.
ಈ ಘಟನೆ ಸಂಬಂಧ ರಾಘವೇಂದ್ರ (35), ಮುಜಾಹಿದ್ (30), ಹುಸೇನ್ ಬಿ (45) ಮೌಲಾಬಿ (50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಬೈಕ್ ನಲ್ಲಿದ್ದ ಪರಮಾನಂದ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಲಬುರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.