ಕಲಬುರಗಿ : ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕುರುಕುಂಟಾದಲ್ಲಿ ನಡೆದಿದೆ. ರಾಜೇಂದ್ರ ಪಾಟೀಲ್ (62) ಮೃತ ವ್ಯಕ್ತಿಯಾಗಿದ್ದಾರೆ ಎಂದು ತಿಳಿದು ಬಂದಿಂದೆ.
ಹೌದು, ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿಯಾಗಿದ್ದು, ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ರಾಜೇಂದ್ರ ಪಾಟೀಲ್ ಮಗಳ ಮನೆಗೆ ಬಂದಿದ್ದರು. ಮಗಳ ಮನೆಯಲ್ಲಿ ಮಲಗಿದ್ದ ವೇಳೆ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದಿದೆ. ಮಣ್ಣಿನಡಿ ಸಿಲುಕಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರುಕುಂಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.