ಬೆಳಗಾವಿಯಲ್ಲಿ KSRTC ಕಂಡಕ್ಟರ್ ಮೇಲಿನ ಹಲ್ಲೆ ಖಂಡಿಸಿ ಮಂಡ್ಯದಲ್ಲಿ ಬಾಯಿಗೆ ಕಪ್ಪು ಪಟ್ಟಿಕಟ್ಟಿಕೊಂಡು ಕನ್ನಡಿಗರ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಡ್ಯದ ಡಿಸಿ ಕಚೇರಿಯ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಿದ್ದಾರೆ.
ಕರವೇ ಜಿಲ್ಲಾಧ್ಯಕ್ಷ ಹೆಚ್.ಡಿ.ಜಯರಾಮ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆಯಲ್ಲಿ ಕನ್ನಡಿಗರು, ಕನ್ನಡ ಭಾಷೆ ಮೇಲೆ ಹಲ್ಲೆ ಮಾಡಿರುವ ಮರಾಠಿಗರು, ಶಿವಸೇನೆ ಮೇಲೆ ಕ್ರಮ ಕೈಗೊಳ್ಳಬೇಕು. ಬಸ್ ಕಂಡಕ್ಟರ್ ಮೇಲೆ ಹಾಕಿರುವ ಕೇಸ್ ವಾಪಸ್ ಪಡೆಯಬೇಕು ಹಾಗೂ ರಾಜ್ಯ ಸರ್ಕಾರ ಸೂಕ್ತ ಕ್ರಮ ವಹಿಸಬೇಕು. ಜೊತೆಗೆ ಕಡ್ಡಾಯವಾಗಿ ಕನ್ನಡ ಭಾಷೆಗೆ ನಮ್ಮ ರಾಜ್ಯದಲ್ಲಿ ಆದ್ಯತೆ ಕೊಡಬೇಕು ಎಂದು ಆಗ್ರಹಿಸಲಾಗಿದೆ.
ಇದೇ ರೀತಿ ಶಿವಸೇನೆ, ಮರಾಠಿಗರು ಪುಂಡಾಟ ಮೆರೆದರೆ ನಾವು ಕೂಡ ಉಗ್ರ ಹೋರಾಟ ಮಾಡಬೇಕಾಗುತ್ತೆ. ನಮ್ಮ ಭಾಷೆ, ನೀರು, ನೆಲೆ ಬೇಕು ಕನ್ನಡ ಭಾಷೆ ಬೇಡವಾ? ತಕ್ಷಣವೇ ಕನ್ನಡ ಭಾಷೆಯನ್ನ ಎಲ್ಲರೂ ಬಳಸಬೇಕು. ಕನ್ನಡಿಗರ ಮೇಲಿನ ಪುಂಡಾಂಟಿಕೆ ಬಿಡಬೇಕು ಎಂದು ಮರಾಠಿಗರಿಗೆ ಕನ್ನಡಿಗರು ಖಡಕ್ ಎಚ್ಚರಿಕೆ ನೀಡಿದ್ದಾರೆ.