ಕರ್ನಾಟಕ

ಮಹಾರಾಷ್ಟ್ರ ಮಳೆಗೆ ಕರ್ನಾಟಕ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ರಾಜ್ಯದ ಬೆಳಗಾವಿ ಜಿಲ್ಲೆಯ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಕೃಷ್ಣಾ ನದಿಗೆ ನೀರಿನ ಅಬ್ಬರ ಹೆಚ್ಚಾಗಿದೆ.

ಆಲಮಟ್ಟಿ ಜಲಾಶಯಕ್ಕೆ ದಿನದಿಂದ ದಿನಕ್ಕೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಈ ಕಾರಣದಿಂದ ಆಲಮಟ್ಟಿ ಜಲಾಶಯದಿಂದ ಜಲಾಶಯದಿಂದ 1.75 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ರಾಜ್ಯದ ಬೆಳಗಾವಿ ಜಿಲ್ಲೆಯ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ  ಮಳೆ ಸುರಿಯುತ್ತಿರುವ ಕಾರಣದಿಂದ ಕೃಷ್ಣಾ ನದಿಗೆ ನೀರಿನ ಅಬ್ಬರ ಹೆಚ್ಚಾಗಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ರಾಜಾಪುರ ಬ್ಯಾರೇಜ್ ನಿಂದ ಕೃಷ್ಣಾ ನದಿಗೆ 89,833 ಕ್ಯುಸೆಕ್ ಹೊರ ಹರಿವು ಇದೆ. ಇನ್ನೂ ದೂಧಗಂಗಾ, ವೇದಗಂಗಾ ನದಿಗಳಿಂದಲೂ ಹೆಚ್ಚಿನ ಪ್ರಮಾಣದ ನೀರು ಕೃಷ್ಣಾ ನದಿಗೆ ಬಂದು ಸೇರುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಅಧಿಕವಾಗುತ್ತಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಎಂಟು ಸೇತುವೆ ಮತ್ತು ಬಾಗಲಕೋಟೆ ಜಿಲ್ಲೆಯ 11 ಬ್ರಿಡ್ಜ್ ಕಂ ಬ್ಯಾರೇಜ್ ಸೇರಿ 20 ಸೇತುವೆಗಳು ಮುಳುಗಿವೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನಲ್ಲಿ ಯಲ್ಲಮ್ಮ ದೇವಾಲಯ ಜಲಾವೃತವಾಗಿವೆ.