ವೈರಲ್

ರೋಡ್ ಡಿವೈಡರ್ ಗೆ ಕೇರಳ ಬಸ್ ಡಿಕ್ಕಿ: ಸ್ಥಳದಲ್ಲೇ ಚಾಲಕ ಸಾವು

ಕೇರಳ ಬಸ್ ನ ಚಾಲಕ ಹಸೀಬ್ (48) ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಮೃತದೇಹ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಸಂಬಂಧ ಮದ್ದೂರು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ : ಕೇರಳದ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರೋಡ್ ಡಿವೈಡರ್ ಗೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬಸ್ ಚಾಲಕ ಸಾವನ್ನಪ್ಪಿದ್ದಾನೆ. ಪ್ರಯಾಣಿಕರು ಪಾರಾದ ಘಟನೆಯೊಂದು ಗೆಜ್ಜಲಗೆರೆ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ ಈ ಘಟನೆ ನಡೆದಿದೆ.

ಕೇರಳ ಬಸ್ ನ ಚಾಲಕ ಹಸೀಬ್ (48) ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಮೃತದೇಹ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಸಂಬಂಧ ಮದ್ದೂರು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.