ಸಿನಿಮಾ
ದರ್ಶನ್ & ಗ್ಯಾಂಗ್ ಬೇಲ್ ವಿರುದ್ಧ ಖಾಕಿ ಕಾನೂನು ಸಮರ
ಪೊಲೀಸ್ ಆಯುಕ್ತ ಬಿ. ದಯಾನಂದ್, ದರ್ಶನ್ ಜಾಮೀನಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ, ಮೇಲ್ಮನವಿ ಮಾಡುವ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಲಾಗ್ತಿದೆ ಎಂದಿದ್ದಾರೆ..
ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ರಿಲೀಸ್ ಆಗಿರುವ ದರ್ಶನ್ & ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿರುವ ಭೀತಿ ಶುರುವಾಗಿದೆ. ಆರೋಪಿಗಳ ಬೇಲ್ ಮಂಜೂರು ವಿರುದ್ಧ ಕಾನೂನು ಸಮರ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.. ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿಗಳ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಖಾಕಿ ಪಡೆ ಮುಂದಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್, ದರ್ಶನ್ ಜಾಮೀನಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ, ಮೇಲ್ಮನವಿ ಮಾಡುವ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಲಾಗ್ತಿದೆ ಎಂದಿದ್ದಾರೆ..