ಬೆಂಗಳೂರು: ನಟ ಕಿಚ್ಚ ಸುದೀಪ್ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ ಕಿಚ್ಚ ಸುದೀಪ್ ಅವರು ಭೇಟಿ ನೀಡಿ, ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಸೀಸನ್- 11ರ ಉದ್ಘಾಟನೆ ಸಮಾರಂಭಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಆಹ್ವಾನಿಸಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫೆಬ್ರುವರಿ 8 ರಂದು ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್) ಸೀಸನ್- 11ರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಈ ಉದ್ಘಾಟನಾ ಕಾರ್ಯಕ್ರಮಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕಿಚ್ಚಾ ಸುದೀಪ್ ಆಹ್ವಾನ ನೀಡಿದ್ದಾರೆ.
ಕಿಚ್ಚ ಸುದೀಪ್ ಸುದೀಪ್ ಅವರ ನೇತೃತ್ವದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡ ಮುನ್ನಡೆಯಲಿದ್ದು , ಉದ್ಯಮಿ ಅಶೋಕ್ ಖೇಣಿಯವರು ತಂಡದ ಮಾಲೀಕರಾಗಿದ್ದಾರೆ. ಮೊದಲ ಪಂದ್ಯ ಬೆಂಗಳೂರಲ್ಲಿ ಫೆ.8 ರಂದು ನಡೆಯಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನೋಸ್ ಹಾಗೂ ಬೆಂಗಾಲ್ ಟೈಗರ್ಸ್ ನಡುವೆ ಪಂದ್ಯ ನಡೆಯಲಿದೆ.
ಇನ್ನೂ ಈ ಬಾರಿ ಒಟ್ಟು 7 ತಂಡಗಳು ಭಾಗವಹಿಸಲಿದ್ದು. ಇದರಲ್ಲಿ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ಸೇರಿ ಭೋಜ್ಪುರಿ ದಬಾಂಗ್ಸ್, ಬೆಂಗಾಲ್ ಟೈಗರ್ಸ್, ತೆಲುಗು ವಾರಿಯರ್ಸ್, ಚೆನ್ನೈ ರೈನೋಸ್, ಪಂಜಾಬ್ ಡಿ ಶೇರ್, ಮುಂಬೈ ಹೀರೋಸ್ ತಂಡಗಳು ಕ್ರಿಕೆಟ್ ಅಖಾಡದಲ್ಲಿ ಕಾದಾಡಲಿವೆ.