ಕರ್ನಾಟಕ

ನಾಲೆಗೆ ನುಗ್ಗಿದ KSRCT ಬಸ್‌ : 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

KSRCT ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ನುಗ್ಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ.

ತುಮಕೂರು: KSRCT ಬಸ್‌ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ನುಗ್ಗಿದ್ದು, ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರಾಗಿದ್ದಾರೆ. ಈ ಘಟನೆ ತುಮಕೂರಿನ ಕುಣಿಗಲ್‌ ತಾಲೂಕಿನ ದೊಡ್ಡಹಳ್ಳಿ ಬಳಿ ನಡೆದಿದೆ. ಕುಣಿಗಲ್‌ ಕಡೆಗೆ ಹೊರಟ್ಟಿದ್ದ ಕೆಎಸ್‌ಆರ್‌ಸಿಟಿ ಬಸ್‌ ತುಂಬಿ ಹರಿಯುತ್ತಿದ್ದ ಹೇಮಾವತಿಗೆ ನಾಲೆಗೆ ನುಗ್ಗಿದೆ. ಅದೃಷ್ಟವಶಾತ್‌ ಪ್ರಯಾಣಿಕರು ದೊಡ್ಡ ಅನಾಹುತದಿಂದ ಪಾರಾಗಿದ್ದು, ಬಸ್ ನಲ್ಲಿದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಕುಣಿಗಲ್ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಘಟನಾ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.