ವಿಜಯನಗರ : ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯೊಂದು ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಸತ್ತೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸುತ್ತೂರು ಗ್ರಾಮದ ಹನುಮಕ್ಕ (45) ಎಂದು ಗುರುತಿಸಲಾಗಿದೆ. ಇನ್ನು ಓರ್ವನ ಸ್ಥಿತಿ ಗಂಭೀರವಾಗಿದೆ.
ಸಾರಿಗೆ ಬಸ್ ದಾವಣಗೆರೆಯಿಂದ ಹರಪ್ಪನಹಳ್ಳಿಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಪಲ್ಟಿಯಾಗಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲುಮಾಡಿದ್ದು, ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.