ಮಂಡ್ಯ : ಮರಕ್ಕೆ KSRTC ಬಸ್ ಡಿಕ್ಕಿ ಹೊಡೆದು 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ K.R. ಪೇಟೆ ತಾಲ್ಲೂಕು ಕುಂದನಹಳ್ಳಿ ಗೇಟ್ ಬಳಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇನ್ನೂ ದುರ್ಘಟನೆಯಲ್ಲಿ ಹಲವು ಮಕ್ಕಳ ಕೈ-ಕಾಲು ಮುರಿದುಕೊಂಡಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ.
ಆಲೇನಹಳ್ಳಿ ಗ್ರಾಮದಿಂದ ಕೆ.ಆರ್.ಪೇಟೆಗೆ ತೆರಳುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಲ್ಲಿ ಶಾಲಾ ಮಕ್ಕಳು ಸೇರಿ ಪ 25ಕ್ಕೂ ಹೆಚ್ಚು ಜನ ಹಾಗೂ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದು, ಗಾಯಾಳುಗಳುಗಳನ್ನ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ K.R.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರನ ದಾಖಲಾಗಿದೆ.