ಕರ್ನಾಟಕ

ಗೌರಿ-ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್​ ನ್ಯೂಸ್​ ನೀಡಿದ KSRTC..! ಏನದು ಸಿಹಿ ಸುದ್ದಿ?

ಸೆಪ್ಟೆಂಬರ್‌ 8 ರಂದು ರಾಜ್ಯ ಮತ್ತು ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗಾಗಿ ವಿಶೇಷ ಬಸ್​ಗಳನ್ನ ನೀಡಲು ನಿರ್ಧರಿಸಲಾಗಿದ್ದು, ಈ ಸೌಲಭ್ಯಗಳನ್ನ ಬಳಸಿಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಗೌರಿಗಣೇಶ ಹಬ್ಬದ ಪ್ರಯುಕ್ತ ಸೆಪ್ಟೆಂಬರ್‌ 5 ರಿಂದ 7 ರವರೆಗೆ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯಗಳಿಗೆ ತೆರಳಲು ಹೆಚ್ಚವರಿ ಬಸ್ ಸೇವೆಗಳನ್ನ ಒದಗಿಸಲಾಗಿದೆ. ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಷೇಶ ಸೇವೆ ನೀಡಲು 1,500 ಹೆಚ್ಚುವರಿ ಬಸ್ ಗಳು ರಸ್ತೆಗಿಳಿಯಲಿವೆ.  

ಜೊತೆಗೆ ಸೆಪ್ಟೆಂಬರ್‌ 8 ರಂದು ರಾಜ್ಯ ಮತ್ತು ಹೊರರಾಜ್ಯಗಳಿಗೆ ತೆರಳುವ ಪ್ರಯಾಣಿಕರಿಗಾಗಿ ವಿಶೇಷ ಬಸ್ಗಳನ್ನ ನೀಡಲು ನಿರ್ಧರಿಸಲಾಗಿದ್ದು, ಈ ಸೌಲಭ್ಯಗಳನ್ನ ಬಳಸಿಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.

ಮೆಜೆಸ್ಟಿಕ್‌ನಿಂದ ಎಲ್ಲೆಲ್ಲಿಗೆ ತೆರಳಲಿದೆ ಬಸ್ ಗಳು? 
ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ನತ್ತ ತೆರಳುವ ಬಸ್‌ಗಳು ಕಾರ್ಯಾಚರಣೆಗೊಳ್ಳಲಿವೆ.

ಸ್ಯಾಟಲೈಟ್‌ ನಿಲ್ದಾಣದಿಂದ ಎಲ್ಲೆಲ್ಲಿಗೆ ಬಸ್‌?
ಮೈಸೂರು ರಸ್ತೆಯ ಸ್ಯಾಟಲೈಟ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಬಸ್‌ಗಳು ಸಂಚರಿಸುತ್ತವೆ.

ಶಾಂತಿನಗರ ನಿಲ್ದಾಣದಿಂದ ಎಲ್ಲೆಲ್ಲಿಗೆ ಬಸ್‌?
ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿ, ಪಾಲಕ್ಕಾಡ್‌, ತ್ರಿಶೂರ್‌, ಎರ್ನಾಕುಲಂ, ಕೋಯಿಕ್ಕೋಡ್‌, ಕ್ಯಾಲಿಕಟ್‌ ಮುಂತಾದ ಸ್ಥಳಗಳಿಗೆ ಸಂಚರಿಸುವ ಪ್ರತಿಷ್ಠಿತ ಬಸ್‌ಗಳು ಶಾಂತಿನಗರ ಬಸ್‌ ನಿಲ್ದಾಣದಿಂದ ತೆರಳುತ್ತವೆ.

ಮುಂಗಡವಾಗಿ ಟಿಕೆಟ್ ಕಾಯ್ದಿರಿಸಿ ಶೇಕಡಾ 10 ರಷ್ಟು ರಿಯಾಯಿತಿ ಪಡೆಯಿರಿ
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದರೆ ಶೇ. 5 ರಿಯಾಯಿತಿ ಸಿಗಲಿದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ದೊರಕುತ್ತದೆ.

ವಾಯವ್ಯ ಕರ್ನಾಟಕ ಸಾರಿಗೆ ವಿಶೇಷ ಬಸ್‌
ಗಣೇಶ ಚತುರ್ಥಿಯ ಪಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 220 ಹೆಚ್ಚುವರಿ ವಿಶೇಷ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.